ಅನಾಥನು ತನ್ನ ಯವ್ವನವನ್ನು ತಲುಪುವ ತನಕ ನೀವು ಅವನ ಸೊತ್ತನ್ನು ಸಮೀಪಿಸಬಾರದು – ಅತ್ಯುತ್ತಮ ವಿಧಾನದ ಹೊರತು. ಹಾಗೆಯೇ ನೀವು ಅಳತೆ ಮತ್ತು ತೂಕವನ್ನು ನ್ಯಾಯೋಚಿತವಾಗಿ ಪೂರ್ತಿಗೊಳಿಸಿರಿ. ನಾವು ಯಾವುದೇ ಜೀವದ ಮೇಲೆ ಅದರ ಸಾಮರ್ಥ್ಯಕ್ಕಿಂತ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ. ನೀವು ಮಾತನಾಡುವಾಗ ನ್ಯಾಯವಾದ ಮಾತನ್ನೇ ಆಡಿರಿ – ತೀರಾ ಆಪ್ತರ ವಿಷಯವಾಗಿದ್ದರೂ ಸರಿಯೇ. ಹಾಗೆಯೇ, ಅಲ್ಲಾಹನ ಜೊತೆಗಿನ ಕರಾರನ್ನು ಪೂರ್ಣವಾಗಿ ಪಾಲಿಸಿರಿ – ನೀವು ಉಪದೇಶ ಸ್ವೀಕರಿಸುವವರಾಗಬೇಕೆಂದು ಇದನ್ನೆಲ್ಲಾ ಅವನು ನಿಮಗೆ ಬೋಧಿಸಿರುವನು