ಅವನೇ, ಭೂಮಿಯಲ್ಲಿ ನಿಮ್ಮನ್ನು ಪ್ರತಿನಿಧಿಗಳಾಗಿ ಕಳುಹಿಸಿದವನು ಮತ್ತು ನಿಮಗೇನನ್ನು ನೀಡಲಾಗಿದೆಯೋ ಆ ಮೂಲಕ ನಿಮ್ಮನ್ನು ಪರೀಕ್ಷಿಸಲಿಕ್ಕಾಗಿ ನಿಮ್ಮಲ್ಲಿ ಕೆಲವರಿಗೆ ಇತರ ಕೆಲವರಿಗಿಂತ ಉನ್ನತ ಸ್ಥಾನಗಳನ್ನು ನೀಡಿದವನು. ಖಂಡಿತವಾಗಿಯೂ ನಿಮ್ಮೊಡೆಯನು ಕ್ಷಿಪ್ರವಾಗಿ ಶಿಕ್ಷಿಸುವವನಾಗಿದ್ದಾನೆ ಮತ್ತು ನಿಸ್ಸಂದೇಹವಾಗಿಯೂ ಅವನು ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ