Back to Languages

Kannada - Chapter 6 - Al-Anam

Translation by Abdussalam Puthige — Permalink

Verse 69 — Surah Al-Anam 6:69

ತಮ್ಮ ಧರ್ಮವನ್ನು ಕೇವಲ ಆಟ ಹಾಗೂ ತಮಾಷೆಯಾಗಿ ಪರಿಗಣಿಸಿರುವವರನ್ನು (ಅವರ ಪಾಡಿಗೆ) ಬಿಟ್ಟು ಬಿಡಿರಿ. ಈ ಲೋಕದ ಜೀವನವು ಅವರನ್ನು ಮೋಸಗೊಳಿಸಿದೆ. ಯಾವ ಚೇತನವೂ ತನ್ನ ಕರ್ಮಗಳ ಫಲವಾಗಿ ವಿನಾಶಕ್ಕೆ ಗುರಿಯಾಗಬಾರದೆಂದು ನೀವು ಇದರ (ಈ ಕುರ್‌ಆನ್‌ನ) ಮೂಲಕ ಜನರಿಗೆ ಉಪದೇಶಿಸಿರಿ. ಅಂತಹ ಚೇತನಕ್ಕೆ ಅಲ್ಲಾಹನಲ್ಲದೆ ಬೇರಾರೂ ರಕ್ಷಕರು ಇರಲಾರರು ಮತ್ತು ಯಾವ ಶಿಫಾರಸ್ಸುದಾರರೂ ಸಿಗಲಾರರು. ಅದು (ಆ ಚೇತನವು) ಸರ್ವಸ್ವವನ್ನೂ ಪರಿಹಾರವಾಗಿ ನೀಡ ಬಯಸಿದರೂ ಅದನ್ನು ಸ್ವೀಕರಿಸಲಾಗದು. ಅವರೇ, ತಮ್ಮ ಕರ್ಮಗಳ ಕಾರಣ ವಿನಾಶಕ್ಕೆ ಗುರಿಯಾದವರು. ಅವರು ಧಿಕ್ಕಾರಿಗಳಾಗಿದ್ದುದಕ್ಕಾಗಿ ಅವರಿಗಾಗಿ ತೀವ್ರ ಕುದಿಯುವ ಪಾನೀಯ ಮತ್ತು ಅಪಾರ ನೋವಿನ ಶಿಕ್ಷೆ ಕಾದಿದೆ