Back to Languages

Kannada - Chapter 6 - Al-Anam

Translation by Abdussalam Puthige — Permalink

Verse 98 — Surah Al-Anam 6:98

ಅವನೇ ಆಕಾಶದಿಂದ ನೀರನ್ನು ಸುರಿಸಿದವನು ಮತ್ತು ಆ ಮೂಲಕ ನಾವು ಎಲ್ಲ ಬೆಳೆಗಳನ್ನು ಹೊರ ತೆಗೆದೆವು ಮತ್ತು ಅದರಿಂದಲೇ ನಾವು ಹಸಿರನ್ನು ಹೊರತೆಗೆದೆವು ಮತ್ತು ಅದರಿಂದಲೇ, ರಾಶಿರಾಶಿ ಧಾನ್ಯಗಳನ್ನು ಹೊರತೆಗೆದೆವು ಮತ್ತು ಖರ್ಜೂರದ ಗೊನೆಗಳಲ್ಲಿ ಭಾರದಿಂದ ಬಾಗಿರುವ ಗೊಂಚಲುಗಳನ್ನು ಹೊರತೆಗೆದೆವು – ಹಾಗೆಯೇ ದ್ರಾಕ್ಷಿ, ಝೈತೂನ್ ಮತ್ತು ದಾಳಿಂಬೆಗಳ ತೋಟಗಳನ್ನು ಬೆಳೆಸಿದೆವು – ಅವುಗಳಲ್ಲಿ ಕೆಲವು ಒಂದೇ ತೆರನಾಗಿ ಗೋಚರಿಸಿದರೆ ಮತ್ತೆ ಕೆಲವು ತೀರಾ ವಿಭಿನ್ನವಾಗಿ ಗೋಚರಿಸುತ್ತವೆ. ಅವು ಚಿಗುರುವಾಗ ಮತ್ತು ಬೆಳೆದು ಹಣ್ಣಾಗುವಾಗ ನೀವು ಅವುಗಳ ಫಲಗಳನ್ನು ನೋಡಿರಿ – ನಂಬಿಕೆ ಉಳ್ಳವರಿಗೆ ಇದರಲ್ಲಿ ಖಂಡಿತವಾಗಿಯೂ ದೊಡ್ಡ ಪಾಠಗಳಿವೆ