ಮುಂದೆ ಅವರು ತಮ್ಮ ಅವಧಿಯ ಕೊನೆಯನ್ನು ಮುಟ್ಟಿದಾಗ ಅವರನ್ನು ನಿಯಮಾನುಸಾರ (ಪತ್ನಿಯರಾಗಿ) ಇಟ್ಟುಕೊಳ್ಳಿರಿ ಅಥವಾ ನಿಯಮಾನುಸಾರ ಅವರನ್ನು ಪ್ರತ್ಯೇಕಿಸಿರಿ ಹಾಗೂ ನಿಮ್ಮ ಪೈಕಿ ಇಬ್ಬರು ನ್ಯಾಯವಂತರನ್ನು ಸಾಕ್ಷಿಯಾಗಿಸಿಕೊಳ್ಳಿರಿ. ಮತ್ತು ನೀವು, ಅಲ್ಲಾಹನಿಗಾಗಿ ಸಾಕ್ಷಿ ಹೇಳಿರಿ. ಇವು, ಅಲ್ಲಾಹನಲ್ಲಿ ಮತ್ತು ಪರಲೋಕದಲ್ಲಿ ನಂಬಿಕೆ ಉಳ್ಳವನಿಗೆ ನೀಡಲಾಗುತ್ತಿರುವ ಉಪದೇಶಗಳು. ಅಲ್ಲಾಹನ ಭಯ ಉಳ್ಳವನಿಗೆ ಅವನು (ಅಲ್ಲಾಹನು, ಸಂಕಟಗಳಿಂದ) ಹೊರ ಬರುವ ದಾರಿ ತೋರುವನು