Back to Languages

Kannada - Chapter 65 - At-Talaq

Translation by Abdussalam Puthige — Permalink

Verse 7 — Surah At-Talaq 65:7

(ಇದ್ದತ್‌ನ ಅವಧಿಯಲ್ಲಿ ) ಸಾಧ್ಯವಾದಷ್ಟು ಮಟ್ಟಿಗೆ ಆ ಮಹಿಳೆಯರನ್ನು ನೀವು ವಾಸಿಸುವಲ್ಲೇ ವಾಸಗೊಳಿಸಿರಿ ಮತ್ತು ಅವರ ಬದುಕನ್ನು ದುಸ್ತರಗೊಳಿಸಲಿಕ್ಕಾಗಿ ಅವರಿಗೆ ಕಿರುಕುಳ ನೀಡಬೇಡಿ. ಒಂದು ವೇಳೆ ಅವರು ಗರ್ಭಿಣಿಯರಾಗಿದ್ದರೆ ಅವರು ಪ್ರಸವಿಸುವ ತನಕ ಅವರ ಖರ್ಚು ವೆಚ್ಚಗಳನ್ನು ಭರಿಸಿರಿ. ಅವರು ನಿಮಗಾಗಿ (ಮಗುವಿಗೆ) ಮೊಲೆಹಾಲುಣಿಸಿದರೆ – ಅವರಿಗೆ ಅವರ ಸಂಭಾವನೆಯನ್ನು ನೀಡಿರಿ. ನೀವು (ಎಲ್ಲ ವಿಷಯಗಳನ್ನೂ) ನಿಯಮಾನುಸಾರ ಪರಸ್ಪರ ಸಮಾಲೋಚಿಸಿ ನಿರ್ಧರಿಸಿರಿ. ಇನ್ನು, ನಿಮಗೆ ಕಷ್ಟವೆನಿಸಿದರೆ, ಅದಕ್ಕೆ (ಮಗುವಿಗೆ) ಬೇರೊಬ್ಬಳು ಮೊಲೆ ಹಾಲುಣಿಸಲಿ