Back to Languages

Kannada - Chapter 66 - At-Tahrim

Translation by Abdussalam Puthige — Permalink

Verse 11 — Surah At-Tahrim 66:11

ಅಲ್ಲಾಹನು ಧಿಕ್ಕಾರಿಗಳಿಗಾಗಿ, ನೂಹರ ಪತ್ನಿ ಮತ್ತು ಲೂತರ ಪತ್ನಿಯ ಉದಾಹರಣೆಯನ್ನು ಮುಂದಿಟ್ಟಿರುವನು; ಅವರಿಬ್ಬರೂ ನಮ್ಮ ಇಬ್ಬರು ಸಜ್ಜನ ದಾಸರ ಅಧೀನದಲ್ಲಿದ್ದರು. ಆದರೆ ಅವರು ಅವರನ್ನು (ತಮ್ಮ ಪತಿಯರನ್ನು) ವಂಚಿಸಿದರು. ಕೊನೆಗೆ ಅಲ್ಲಾಹನೆದುರು ಅವರಿಂದ (ತಮ್ಮ ಪತಿಯರಿಂದ) ಅವರಿಗೆಯಾವ ಲಾಭವೂ ಆಗಲಿಲ್ಲ. ‘‘ನರಕದೊಳಗೆ ಸೇರಿ ಕೊಂಡವರ ಜೊತೆ ನೀವೂ ಸೇರಿಕೊಳ್ಳಿರಿ’’ ಎಂದು ಅವರೊಡನೆ ಹೇಳಲಾಯಿತು