ವಿಶ್ವಾಸಿಗಳೇ, ನಿರ್ಮಲ ಮನಸ್ಸಿನೊಂದಿಗೆ ಅಲ್ಲಾಹನ ಮುಂದೆ ಪಶ್ಚಾತ್ತಾಪ ಪಡಿರಿ. ನಿಮ್ಮ ಒಡೆಯನು ನಿಮ್ಮಿಂದ ನಿಮ್ಮ ಪಾಪಗಳನ್ನು ನಿವಾರಿಸಬಹುದು ಮತ್ತು ನಿಮ್ಮನ್ನು ತಳದಲ್ಲಿ ನದಿಗಳು ಹರಿಯುವ ಸ್ವರ್ಗದೊಳಗೆ ಸೇರಿಸಬಹುದು. ಅಂದು ಅಲ್ಲಾಹನು ಪ್ರವಾದಿಯನ್ನಾಗಲೀ ಅವರ ಜೊತೆಗಿರುವ ವಿಶ್ವಾಸಿಗಳನ್ನಾಗಲೀ ಅಪಮಾನಿಸಲಾರನು. ಅವರ ಪ್ರಕಾಶವು ಅವರ ಮುಂಭಾಗದಲ್ಲೂ ಬಲ ಭಾಗದಲ್ಲೂ ಚಲಿಸುತ್ತಿರುವುದು. ಅವರು ಹೇಳುವರು; ‘‘ನಮ್ಮೊಡೆಯಾ, ನಮ್ಮ ಬೆಳಕನ್ನು ಸಂಪೂರ್ಣ ಗೊಳಿಸು ಮತ್ತು ನಮ್ಮನ್ನು ಕ್ಷಮಿಸು. ನೀನು ಎಲ್ಲವನ್ನೂ ಮಾಡ ಬಲ್ಲೆ’’