Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 69 - Al-Haqqah
Translation by Abdussalam Puthige — Permalink
Verse 1 — Surah Al-Haqqah 69:1
ನಿಜವಾಗಿ, ಇದು ಸರ್ವಲೋಕಗಳಿಗಾಗಿ ಇರುವ ಒಂದು ಉಪದೇಶವಾಗಿದೆ
Verse 2 — Surah Al-Haqqah 69:2
ನೈಜ ಸಂಭವ
Verse 3 — Surah Al-Haqqah 69:3
ಏನದು ನೈಜ ಸಂಭವ
Verse 4 — Surah Al-Haqqah 69:4
ನಿಮಗೇನು ಗೊತ್ತು, ಆ ನೈಜ ಸಂಭವದ ಕುರಿತು
Verse 5 — Surah Al-Haqqah 69:5
ಸಮೂದ್ ಮತ್ತು ಆದ್ ಜನಾಂಗದವರು ಆ ಹಠಾತ್ ಸಂಭವವನ್ನು ಅಲ್ಲಗಳೆದರು
Verse 6 — Surah Al-Haqqah 69:6
ಕೊನೆಗೆ ಸಮೂದರನ್ನು ಸಿಡಿಲಿಗೆ ತುತ್ತಾಗಿಸಿ ನಾಶ ಮಾಡಲಾಯಿತು
Verse 7 — Surah Al-Haqqah 69:7
ಇನ್ನು, ಆದ್‌ರನ್ನು ತೀವ್ರ ವೇಗದ ಬಿರುಗಾಳಿಯೊಂದರ ಮೂಲಕ ನಾಶ ಮಾಡಲಾಯಿತು
Verse 8 — Surah Al-Haqqah 69:8
ಅದನ್ನು ಸತತ ಏಳು ರಾತ್ರಿ ಹಾಗೂ ಎಂಟು ದಿನಗಳ ಕಾಲ ಅವರ ಮೇಲೆ ಹೇರಲಾಯಿತು. ಮತ್ತು ಅಲ್ಲಿದ್ದವರೆಲ್ಲರೂ ಟೊಳ್ಳಾದ ಖರ್ಜೂರದ ಕಾಂಡಗಳೋ ಎಂಬಂತೆ ಸತ್ತು ಬಿದ್ದಿರುವುದು ನಿಮಗೆ ಕಾಣಿಸುತ್ತಿತ್ತು
Verse 9 — Surah Al-Haqqah 69:9
ಅವರ ಪೈಕಿ ಉಳಿದಿರುವ ಯಾರಾದರೂ ನಿಮಗೆ ಕಾಣಿಸುತ್ತಿದ್ದಾರೆಯೇ
Verse 10 — Surah Al-Haqqah 69:10
ಫಿರ್‌ಔನ್ ಹಾಗೂ ಅವನಿಗಿಂತ ಹಿಂದಿನವರು ಮತ್ತು ಬುಡಮೇಲಾದ ನಾಡಿನವರು ಅಪರಾಧಗಳನ್ನು ಎಸಗಿದ್ದರು
Verse 11 — Surah Al-Haqqah 69:11
ಅವರು ತಮ್ಮ ಒಡೆಯನ (ಅಲ್ಲಾಹನ) ದೂತರ ಆದೇಶಗಳನ್ನು ಮೀರಿ ನಡೆದಾಗ ಅವನು ಅವರನ್ನು ಬಹಳ ಕಠೋರವಾಗಿ ದಂಡಿಸಿದನು
Verse 12 — Surah Al-Haqqah 69:12
ಪ್ರವಾಹವು ಮಿತಿಮೀರಿದಾಗ ನಾವು ನಿಮ್ಮನ್ನು ಹಡಗಿಗೆ ಹತ್ತಿಸಿದೆವು
Verse 13 — Surah Al-Haqqah 69:13
ಅದನ್ನು ನಿಮ್ಮ ಪಾಲಿಗೆ ಸ್ಮಾರಕವಾಗಿಸಲಿಕ್ಕಾಗಿ ಮತ್ತು ನೆನಪಿಡುವ ಕಿವಿಗಳು ಅದನ್ನು ನೆನಪಿಡಲೆಂದು
Verse 14 — Surah Al-Haqqah 69:14
ಕಹಳೆಯನ್ನು ಒಂದು ಬಾರಿ ಊದಿದಾಗ
Verse 15 — Surah Al-Haqqah 69:15
ಭೂಮಿಯನ್ನೂ ಪರ್ವತಗಳನ್ನೂ ಮೇಲಕ್ಕೆತ್ತಲಾಗುವುದು ಮತ್ತು ಅವೆರಡನ್ನೂ ಪುಡಿಗಟ್ಟಿ ಒಮ್ಮೆಗೇ ನೆಲಸಮಗೊಳಿಸಲಾಗುವುದು
Verse 16 — Surah Al-Haqqah 69:16
ಅಂದು ಸಂಭವಿಸಲಿದೆ, ಆ ನೈಜ ಸಂಭವ
Verse 17 — Surah Al-Haqqah 69:17
ಆಕಾಶವು ಬಿರಿದು ಬಿಡುವುದು ಮತ್ತು ಅಂದು ಅದು ತೀರಾ ದುರ್ಬಲ ವಾಗಿರುವುದು
Verse 18 — Surah Al-Haqqah 69:18
ಮಲಕ್‌ಗಳು ಅದರ ಸುತ್ತಲೂ ಇರುವರು, ಮತ್ತು ಆ ದಿನ ಎಂಟು ಮಂದಿ (ಮಲಕ್‌ಗಳು) ನಿಮ್ಮೊಡೆಯನ ಪೀಠವನ್ನು ತಮ್ಮ ಮೇಲೆ ಹೊತ್ತಿರುವರು
Verse 19 — Surah Al-Haqqah 69:19
ಅಂದು ನಿಮ್ಮನ್ನು (ಎಲ್ಲರ ಮುಂದೆ) ಹಾಜರುಪಡಿಸಲಾಗುವುದು ಮತ್ತು ನಿಮ್ಮ ಯಾವ ವಿಷಯವೂ ಗುಪ್ತವಾಗಿ ಉಳಿಯದು
Verse 20 — Surah Al-Haqqah 69:20
ಕರ್ಮಪತ್ರವನ್ನು ಬಲಗೈಯಲ್ಲಿ ನೀಡಲಾದವನು (ಇತರರೊಡನೆ) ಹೇಳುವನು; ‘‘ಇದೋ ನನ್ನ ಕರ್ಮಪತ್ರವನ್ನು ಓದಿರಿ’’
Verse 21 — Surah Al-Haqqah 69:21
‘‘ನಾನು ನನ್ನ ವಿಚಾರಣೆಯನ್ನು ಖಂಡಿತ ಎದುರಿಸಬೇಕಾಗುವುದು ಎಂದು ನಾನು ಮೊದಲೇ ನಂಬಿದ್ದೆ’’
Verse 22 — Surah Al-Haqqah 69:22
ಅವನು ಧಾರಾಳ ಸುಖಃದಲ್ಲಿರುವವನು
Verse 23 — Surah Al-Haqqah 69:23
ಎತ್ತರವಾದ ಸ್ವರ್ಗ ತೋಟಗಳಲ್ಲಿ
Verse 24 — Surah Al-Haqqah 69:24
ಅಲ್ಲಿಯ ಹಣ್ಣಿನ ಗೊಂಚಲುಗಳು ಬಾಗಿರುವವು
Verse 25 — Surah Al-Haqqah 69:25
(ಅವರೊಡನೆ ಹೇಳಲಾಗುವುದು;) ಕಳೆದು ಹೋದ ದಿನಗಳಲ್ಲಿ ನೀವು ಮಾಡಿದ್ದ ಕರ್ಮಗಳ ಫಲವಾಗಿ (ಇಂದು) ಮೋಜು ಮಾಡುತ್ತಾ ತಿನ್ನಿರಿ ಹಾಗೂ ಕುಡಿಯಿರಿ
Verse 26 — Surah Al-Haqqah 69:26
ಕರ್ಮ ಪತ್ರವನ್ನು ಎಡಗೈಯಲ್ಲಿ ನೀಡಲಾದವನು ಹೇಳುವನು; ‘‘ಅಯ್ಯೋ, ನನಗೆ ನನ್ನ ಕರ್ಮಪತ್ರವು ಸಿಗದೆ ಇದ್ದಿದ್ದರೆ ಚೆನ್ನಾಗಿತ್ತು!’’
Verse 27 — Surah Al-Haqqah 69:27
‘‘ಮತ್ತು ನನ್ನ ಫಲಿತಾಂಶ ಏನೆಂಬುದು ನನಗೆ ತಿಳಿಯದೆ ಇದ್ದಿದ್ದರೆ ಚೆನ್ನಾಗಿತ್ತು’’
Verse 28 — Surah Al-Haqqah 69:28
‘‘ಅಯ್ಯೋ, ಆ ನನ್ನ ಮರಣವೇ ಅಂತಿಮವಾಗಿದ್ದರೆ ಚೆನ್ನಾಗಿತ್ತು’’
Verse 29 — Surah Al-Haqqah 69:29
‘‘ಇಂದು ನನ್ನ ಸಂಪತ್ತಿನಿಂದ ನನಗೆ ಯಾವ ಲಾಭವೂ ಇಲ್ಲ’’
Verse 30 — Surah Al-Haqqah 69:30
‘‘ನನ್ನ ಅಧಿಕಾರವೆಲ್ಲವೂ ನನ್ನಿಂದ ಕಳೆದು ಹೋಗಿದೆ’’
Verse 31 — Surah Al-Haqqah 69:31
ಆಗ ಆದೇಶಿಸಲಾಗುವುದು; ಅವನನ್ನು ಹಿಡಿಯಿರಿ ಮತ್ತು ನೊಗವನ್ನು ತೊಡಿಸಿರಿ
Verse 32 — Surah Al-Haqqah 69:32
ಮತ್ತು ಅವನನ್ನು ನರಕದ ಬೆಂಕಿಗೆ ಎಸೆದು ಬಿಡಿರಿ
Verse 33 — Surah Al-Haqqah 69:33
ಮತ್ತು ಅವನನ್ನು ಎಪ್ಪತ್ತು ಗಜ ಉದ್ದದ ಸಂಕೋಲೆಯಲ್ಲಿ ಬಿಗಿದು ಕಟ್ಟಿರಿ
Verse 34 — Surah Al-Haqqah 69:34
ಅವನು ಮಹೋನ್ನತನಾದ ಅಲ್ಲಾಹನಲ್ಲಿ ನಂಬಿಕೆ ಇಟ್ಟಿರಲಿಲ್ಲ
Verse 35 — Surah Al-Haqqah 69:35
ಮತ್ತು ಅವನು ಬಡವರಿಗೆ ಉಣಿಸುವುದಕ್ಕೆ ಯಾರನ್ನೂ ಪ್ರೇರೇಪಿಸುತ್ತಿರಲಿಲ್ಲ
Verse 36 — Surah Al-Haqqah 69:36
ಇಂದು, ಅವನಿಗಿಲ್ಲಿ ಮಿತ್ರರು ಯಾರೂ ಇಲ್ಲ
Verse 37 — Surah Al-Haqqah 69:37
ಕೀವಿನ ಹೊರತು ಬೇರೆ ಯಾವ ಆಹಾರವೂ ಅವನಿಗೆ ದಕ್ಕದು
Verse 38 — Surah Al-Haqqah 69:38
ಮತ್ತು ಅದನ್ನು ಅಪರಾಧಿಗಳ ಹೊರತು ಬೇರೆ ಯಾರೂ ತಿನ್ನಲಾರರು
Verse 39 — Surah Al-Haqqah 69:39
ನಾನು ನಿಮಗೆ ಕಾಣುವ ವಸ್ತುಗಳ ಆಣೆ ಹಾಕಿ ಹೇಳುತ್ತಿದ್ದೇನೆ
Verse 40 — Surah Al-Haqqah 69:40
ಮತ್ತು ನಾನು ನಿಮಗೆ ಕಾಣದ ವಸ್ತುಗಳ ಆಣೆ ಹಾಕಿ ಹೇಳುತ್ತಿದ್ದೇನೆ
Verse 41 — Surah Al-Haqqah 69:41
ಖಂಡಿತವಾಗಿಯೂ ಇದು ಒಬ್ಬ ಗೌರವಾನ್ವಿತ ದೂತನ ಮಾತು
Verse 42 — Surah Al-Haqqah 69:42
ಇದು ಯಾವುದೇ ಕವಿಯ ಮಾತಲ್ಲ. ಅದರೆ ನೀವು ನಂಬುವುದು ಮಾತ್ರ ಕಡಿಮೆ
Verse 43 — Surah Al-Haqqah 69:43
ಇದು ಯಾವುದೇ ಮಾಂತ್ರಿಕನ ಮಾತಲ್ಲ. ನೀವು ಪಾಠ ಕಲಿಯುವುದು ತುಂಬಾ ಕಡಿಮೆ
Verse 44 — Surah Al-Haqqah 69:44
ಇದು ಸಕಲ ಲೋಕಗಳ ಒಡೆಯನು ಇಳಿಸಿ ಕೊಟ್ಟಿರುವ ಸಂದೇಶ
Verse 45 — Surah Al-Haqqah 69:45
ಒಂದು ವೇಳೆ ಅವರು (ದೂತರು) ನಮ್ಮ ಕುರಿತು ಏನಾದರೂ ಸುಳ್ಳು ಹೇಳುತ್ತಿದ್ದರೆ
Verse 46 — Surah Al-Haqqah 69:46
ನಾವು ಅವರ ಬಲಗೈಯನ್ನು ಹಿಡಿಯುತ್ತಿದ್ದೆವು
Verse 47 — Surah Al-Haqqah 69:47
ಮತ್ತು ನಾವು ಅವರ ಜೀವನಾಡಿಯನ್ನು ಕತ್ತರಿಸಿ ಬಿಡುತ್ತಿದ್ದೆವು
Verse 48 — Surah Al-Haqqah 69:48
ನಿಮ್ಮ ಪೈಕಿ ಯಾರಿಗೂ ನಮ್ಮನ್ನು ತಡೆಯಲು ಸಾಧ್ಯವಿರಲಿಲ್ಲ
Verse 49 — Surah Al-Haqqah 69:49
ಇದು (ಈ ಗ್ರಂಥವು) ಖಂಡಿತ ಧರ್ಮನಿಷ್ಠರ ಪಾಲಿಗೆ ಒಂದು ಉಪದೇಶವಾಗಿದೆ
Verse 50 — Surah Al-Haqqah 69:50
ನಿಮ್ಮ ನಡುವೆ ಸುಳ್ಳುಗಾರರು ಇರುವ ಕುರಿತು ನಮಗೆ ತಿಳಿದಿದೆ
Verse 51 — Surah Al-Haqqah 69:51
ಖಂಡಿತವಾಗಿಯೂ ಇದು, ಧಿಕ್ಕಾರಿಗಳು ಪರಿತಪಿಸುವುದಕ್ಕೆ ಕಾರಣವಾಗಲಿದೆ
Verse 52 — Surah Al-Haqqah 69:52
ಇದು ನಿಸ್ಸಂದೇಹವಾಗಿಯೂ ನಂಬಲರ್ಹ ಸತ್ಯವಾಗಿದೆ