Back to Languages

Kannada - Chapter 7 - Al-Araf

Translation by Abdussalam Puthige — Permalink

Verse 142 — Surah Al-Araf 7:142

ಮೂಸಾ, ನಾವು ನಿಗದಿಪಡಿಸಿದ ಅವಧಿಗಾಗಿ ಬಂದಾಗ, ತಮ್ಮ ಒಡೆಯನೊಡನೆ ಮಾತನಾಡಿದರು. ನನ್ನೊಡೆಯಾ, ನಾನು ನಿನ್ನನ್ನು ನೋಡಬಲ್ಲಂತಹ ದೃಷ್ಟಿಯನ್ನು ನೀನು ನನಗೆ ನೀಡು ಎಂದು ಅವರು ಹೇಳಿದರು. ಅವನು (ಅಲ್ಲಾಹನು) ಹೇಳಿದನು; ನನ್ನನ್ನು ನೋಡಲು ನಿನಗೆ ಸಾಧ್ಯವಿಲ್ಲ. ಆದರೆ ನೀನು ಆ ಪರ್ವತದೆಡೆಗೆ ನೋಡು, ಅದು ತನ್ನ ಸ್ಥಾನದಲ್ಲೇ ನಿಂತಿದ್ದರೆ ನೀನು ನನ್ನನ್ನು ನೋಡಬಹುದು. ತರುವಾಯ ಅವರ ಒಡೆಯನು ಪರ್ವತದೆಡೆಗೆ ದಿವ್ಯ ಬೆಳಕನ್ನು ಬೀರಿ ಅದನ್ನು ಚೂರು ಚೂರಾಗಿಸಿ ಬಿಟ್ಟನು ಮತ್ತು ಮೂಸಾ ಪ್ರಜ್ಞೆ ಕಳೆದುಕೊಂಡು ಬಿದ್ದುಬಿಟ್ಟರು. ಆ ಬಳಿಕ ಅವರಿಗೆ ಪ್ರಜ್ಞೆ ಬಂದಾಗ ಅವರು ಹೇಳಿದರು; ನೀನು ಪರಮ ಪಾವನನು, ನಾನು ಪಶ್ಚಾತ್ತಾಪ ಪಟ್ಟು ನಿನ್ನೆಡೆಗೆ ಮರಳುತ್ತೇನೆ ಮತ್ತು ನಂಬುವವರ ಪೈಕಿ ನಾನು ಪ್ರಥಮನಾಗುತ್ತೇನೆ