ಅವರು ನಿರಕ್ಷರಿ ಪ್ರವಾದಿಯನ್ನು ಅನುಸರಿಸುತ್ತಾರೆ. ಅವರ (ಆ ಪ್ರವಾದಿಯ) ಕುರಿತು ತಮ್ಮ ಬಳಿ ಇರುವ ತೌರಾತ್ ಮತ್ತು ಇಂಜೀಲ್‌ಗಳಲ್ಲಿ (ಈ ರೀತಿ) ಬರೆದಿರುವುದನ್ನು ಅವರು ಕಾಣುತ್ತಾರೆ; ‘‘ಅವರು (ಆ ಪ್ರವಾದಿ) ಅವರಿಗೆ, ಒಳಿತನ್ನು ಆದೇಶಿಸುವರು, ಅವರನ್ನು ಕೆಡುಕಿನಿಂದ ತಡೆಯುವರು, ನಿರ್ಮಲವಾದವುಗಳನ್ನು ಅವರ ಪಾಲಿಗೆ ಸಮ್ಮತಗೊಳಿಸುವರು, ಮಲಿನ ವಸ್ತುಗಳನ್ನು ಅವರ ಪಾಲಿಗೆ ನಿಷೇಧಿಸುವರು, ಅವರಿಂದ ಅವರ ಭಾರಗಳನ್ನು ಇಳಿಸುವರು ಮತ್ತು ಅವರ ಮೇಲಿದ್ದ ನೊಗಗಳನ್ನು ಕಳಚುವರು – ಅವರಲ್ಲಿ ನಂಬಿಕೆ ಇಟ್ಟು ಅವರನ್ನು ಸಮರ್ಥಿಸುವವರು, ಅವರಿಗೆ ನೆರವಾಗುವವರು ಮತ್ತು ಅವರ ಜೊತೆಗೆ ಇಳಿಸಲಾಗಿರುವ ಪ್ರಕಾಶವನ್ನು ಅನುಸರಿಸುವವರೇ ವಿಜಯಿಗಳು.’’