ಅವರೊಡನೆ ಹೀಗೆನ್ನಲಾಗಿತ್ತು; ನೀವು ಈ ಪಟ್ಟಣದಲ್ಲಿ ವಾಸಿಸಿರಿ, ಇಲ್ಲಿರುವುದರಲ್ಲಿ ನೀವಿಚ್ಛಿಸುವಂತೆ ತಿನ್ನಿರಿ, ’ಹಿತ್ತಃ’ ಎನ್ನುತ್ತಲಿರಿ (ಕ್ಷಮೆಯಾಚಿಸುತ್ತಲಿರಿ) ಮತ್ತು ಸಾಷ್ಟಾಂಗವೆರಗುತ್ತಾ ಪಟ್ಟಣದ ದ್ವಾರವನ್ನು ಪ್ರವೇಶಿಸಿರಿ. ನಾವು ನಿಮ್ಮ ಪ್ರಮಾದಗಳನ್ನು ಕ್ಷಮಿಸಿ ಬಿಡುವೆವು. ಸತ್ಕರ್ಮಿಗಳಿಗೆ ನಾವು ಬಹುಬೇಗನೇ ಇನ್ನಷ್ಟನ್ನು ನೀಡುವೆವು