Back to Languages

Kannada - Chapter 7 - Al-Araf

Translation by Abdussalam Puthige — Permalink

Verse 68 — Surah Al-Araf 7:68

ನೀವೇನು, ನಿಮ್ಮನ್ನು ಎಚ್ಚರಿಸಲು, ನಿಮ್ಮ ಒಡೆಯನ ಉಪದೇಶವು ನಿಮ್ಮಳಗಿನ ಒಬ್ಬ ವ್ಯಕ್ತಿಯ ಬಳಿಗೆ ಬಂದಿರುವ ಕುರಿತು ಅಚ್ಚರಿಪಡುತ್ತೀರಾ? ಸ್ಮರಿಸಿರಿ; ನೂಹರ ಜನಾಂಗದ ಬಳಿಕ, ಅವನು (ಅಲ್ಲಾಹನು) ನಿಮ್ಮನ್ನು ಉತ್ತರಾಧಿಕಾರಿಗಳಾಗಿ ಮಾಡಿದನು ಮತ್ತು ರಚನೆಯಲ್ಲಿ ನಿಮಗೆ ಶ್ರೇಷ್ಠತೆಯನ್ನು ನೀಡಿದನು. ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ – ನೀವು ವಿಜಯಿಗಳಾಗಬಹುದು