Back to Languages

Kannada - Chapter 7 - Al-Araf

Translation by Abdussalam Puthige — Permalink

Verse 88 — Surah Al-Araf 7:88

ಅಲ್ಲಾಹನು ನಿಮ್ಮ ಪಂಥದಿಂದ ನಮ್ಮನ್ನು ರಕ್ಷಿಸಿದ ಬಳಿಕ ನಾವು ಮತ್ತೆ ಅದರೆಡೆಗೆ ಮರಳಿದರೆ ನಾವು ಅಲ್ಲಾಹನ ಮೇಲೆ ಒಂದು ಭಾರೀ ಸುಳ್ಳಾರೋಪವನ್ನು ಹೊರಿಸಿದಂತಾದೀತು. ಹೀಗಿರುತ್ತಾ ನಮ್ಮೊಡೆಯನಾದ ಅಲ್ಲಾಹನೇ ಇಚ್ಛಿಸುವ ತನಕ, ಅದರೆಡೆಗೆ ಮರಳಲು ನಮಗೆ ಸಾಧ್ಯವಿಲ್ಲ. ನಮ್ಮೊಡನೆಯನ ಜ್ಞಾನವು ಎಲ್ಲವನ್ನೂ ಆವರಿಸಿಕೊಂಡಿದೆ. ನಾವು ಅಲ್ಲಾಹನಲ್ಲಿ ಸಂಪೂರ್ಣ ಭರವಸೆ ಇಟ್ಟಿರುವೆವು. ನಮ್ಮೊಡೆಯಾ, ನೀನೀಗ ನಮ್ಮ ಹಾಗೂ ನಮ್ಮ ಜನಾಂಗದ ನಡುವೆ ಸತ್ಯದೊಂದಿಗೆ ತೀರ್ಮಾನ ಮಾಡಿಬಿಡು. ನೀನು ಅತ್ಯುತ್ತಮ ತೀರ್ಮಾನ ಮಾಡುವವನಾಗಿರುವೆ