Back to Languages

Kannada - Chapter 73 - Al-Muzzammil

Translation by Abdussalam Puthige — Permalink

Verse 20 — Surah Al-Muzzammil 73:20

ನಿಮ್ಮ ಒಡೆಯನಿಗೆ ಖಂಡಿತ ತಿಳಿದಿದೆ; ನೀವು ಮತ್ತು ನಿಮ್ಮ ಜೊತೆಗಿರುವ ಕೆಲವರು, ಕೆಲವೊಮ್ಮೆ ರಾತ್ರಿಯ ಸುಮಾರು ಮೂರನೇ ಎರಡು ಭಾಗವನ್ನು, ಇನ್ನು ಕೆಲವೊಮ್ಮೆ ಅರ್ಧ ಭಾಗವನ್ನು ಮತ್ತೆ ಕೆಲವೊಮ್ಮೆ ಮೂರನೇ ಒಂದು ಭಾಗವನ್ನು (ನಮಾಝ್‌ನಲ್ಲಿ) ನಿಂತುಕೊಂಡು ಕಳೆಯುತ್ತೀರಿ. ಅಲ್ಲಾಹನೇ ರಾತ್ರಿ ಮತ್ತು ಹಗಲನ್ನು ರೂಪಿಸಿದವನು. ಅದನ್ನು (ಈ ಆದೇಶವನ್ನು) ಬಹುಕಾಲ ಪಾಲಿಸಲು ನಿಮಗೆ ಸಾಧ್ಯವಾಗದೆಂಬುದು ಅವನಿಗೆ ತಿಳಿದಿದೆ. ಆದ್ದರಿಂದ ಅವನು ನಿಮ್ಮ ಮೇಲೆ ದಯೆ ತೋರಿರುವನು. ನೀವಿನ್ನು ಕುರ್‌ಆನ್‌ನಿಂದ, ಸುಲಭವಾಗಿ ಓದಲು ಸಾಧ್ಯವಾಗುವಷ್ಟನ್ನು ಓದಿರಿ. ನಿಮ್ಮಲ್ಲಿ ಕೆಲವರು ರೋಗಿಗಳಿದ್ದಾರೆ, ಇನ್ನು ಕೆಲವರು ಅಲ್ಲಾಹನ ಅನುಗ್ರಹವನ್ನರಸುತ್ತಾ ಭೂಮಿಯಲ್ಲಿ ಸಂಚರಿಸುತ್ತಿರುತ್ತಾರೆ ಮತ್ತು ಕೆಲವರು ಅಲ್ಲಾಹನ ಮಾರ್ಗದಲ್ಲಿ ಹೋರಾಟನಿರತರಾಗಿರುತ್ತಾರೆ. ಆದ್ದರಿಂದ ನೀವು, ಅದರಿಂದ (ಕುರ್‌ಆನಿನಿಂದ) ಸುಲಭವಾಗಿ ಓದಬಹುದಾದಷ್ಟನ್ನು ಓದಿರಿ ಹಾಗೂ ನಮಾಝನ್ನು ಪಾಲಿಸಿರಿ, ಝಕಾತನ್ನು ಪಾವತಿಸಿರಿ. ಮತ್ತು ಅಲ್ಲಾಹನಿಗೆ ಸತ್ಕರ್ಮಗಳ ಸಾಲವನ್ನು ನೀಡಿರಿ. ನೀವು ನಿಮಗಾಗಿ ಮುಂದೆ ಕಳುಹಿಸಿರುವ ಪ್ರತಿಯೊಂದು ಸತ್ಕರ್ಮವನ್ನು ಅಲ್ಲಾಹನ ಬಳಿ ಕಾಣುವಿರಿ. ಆಗ ಅದು ಇನ್ನಷ್ಟು ಉತ್ತಮ ರೂಪದಲ್ಲಿರುವುದು ಮತ್ತು ಭಾರೀ ಪ್ರತಿಫಲದಾಯಕವಾಗಿರುವುದು. ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ಅಲ್ಲಾಹನು ಖಂಡಿತ ಕ್ಷಮಿಸುವವನೂ ಕರುಣಾಮಯಿಯೂ ಆಗಿರುತ್ತಾನೆ