Back to Languages

Kannada - Chapter 74 - Al-Muddaththir

Translation by Abdussalam Puthige — Permalink

Verse 31 — Surah Al-Muddaththir 74:31

ನಾವು ಮಲಕ್‌ಗಳನ್ನೇ ನರಕದ ಕಾವಲುಗಾರರಾಗಿಸಿರುವೆವು ಮತ್ತು ಅವರ ಸಂಖ್ಯೆಯನ್ನು ಧಿಕ್ಕಾರಿಗಳ ಪಾಲಿಗೆ ಪರೀಕ್ಷೆಯಾಗಿಸಿರುವೆವು – ಗ್ರಂಥದವರು ನಂಬಲೆಂದು ಹಾಗೂ ವಿಶ್ವಾಸಿಗಳ ವಿಶ್ವಾಸವು ಹೆಚ್ಚಲೆಂದು ಮತ್ತು ಗ್ರಂಥದವರಾಗಲಿ ವಿಶ್ವಾಸಿಗಳಾಗಲಿ ಸಂಶಯಕ್ಕೆ ತುತ್ತಾಗಬಾರದೆಂದು ಮತ್ತು ಮನಸ್ಸಿನಲ್ಲಿ ರೋಗವಿರುವವರು ಹಾಗೂ ಧಿಕ್ಕಾರಿಗಳು ‘‘ಈ ಉದಾಹರಣೆಯ ಮೂಲಕ ಅಲ್ಲಾಹನು ಬಯಸುವುದೇನನ್ನು?’’ ಎಂದು ಕೇಳಲೆಂದು. ಈ ರೀತಿ ಅಲ್ಲಾಹನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ನಿಮ್ಮ ಒಡೆಯನ ಪಡೆಗಳ ಕುರಿತು ಅವನ ಹೊರತು ಬೇರೆ ಯಾರಿಗೂ ತಿಳಿಯದು. ಇದು ಮಾನವರಿಗಾಗಿರುವ ಉಪದೇಶ ಮಾತ್ರವಾಗಿದೆ