Back to Languages
Kannada - Chapter 81
Translation by Abdussalam Puthige
Verse 1
ಸೂರ್ಯನನ್ನು ಮಡಚಿ ಬಿಡಲಾದಾಗ
Verse 2
ನಕ್ಷತ್ರಗಳು ನಿಸ್ತೇಜವಾದಾಗ
Verse 3
ಪರ್ವತಗಳನ್ನು ಚಲಾಯಿಸಲಾದಾಗ
Verse 4
ತುಂಬು ಗರ್ಭಿಣಿಯಾಗಿರುವ ಒಂಟೆಗಳನ್ನು ಬಿಟ್ಟು ಬಿಡಲಾದಾಗ
Verse 5
ಕಾಡು ಪ್ರಾಣಿಗಳನ್ನೆಲ್ಲಾ ಒಟ್ಟು ಸೇರಿಸಲಾದಾಗ
Verse 6
ಸಮುದ್ರಗಳನ್ನು ಉಕ್ಕೇರಿಸಲಾದಾಗ
Verse 7
ಜೀವಗಳನ್ನು (ಶರೀರಗಳೊಂದಿಗೆ) ಜೋಡಿಸಲಾದಾಗ
Verse 8
ಜೀವಂತ ಹೂಳಲ್ಪಟ್ಟವಳೊಡನೆ ಪ್ರಶ್ನಿಸಲಾದಾಗ –
Verse 9
ಯಾವ ಪಾಪಕ್ಕಾಗಿ ಆಕೆಯನ್ನು ಕೊಲ್ಲಲಾಯಿತೆಂದು
Verse 10
ಕರ್ಮ ಪತ್ರಗಳನ್ನು ತೆರೆಯಲಾದಾಗ
Verse 11
ಮತ್ತು ಆಕಾಶದ ಕವಚವನ್ನು ಸರಿಸಲಾದಾಗ
Verse 12
ನರಕದ ಅಗ್ನಿಯನ್ನು ಭುಗಿಲೆಬ್ಬಿಸಲಾದಾಗ
Verse 13
ಸ್ವರ್ಗವನ್ನು ಹತ್ತಿರ ತರಲಾದಾಗ
Verse 14
ಪ್ರತಿಯೊಬ್ಬನಿಗೂ ತಿಳಿದು ಬಿಡುವುದು ತಾನೇನು ತಂದಿರುವೆನೆಂದು
Verse 15
ಹಾಗಲ್ಲ – ನಾನು, ಹಿನ್ನಡೆಯುವ ನಕ್ಷತ್ರಗಳ ಆಣೆ ಹಾಕುತ್ತೇನೆ
Verse 16
ಅವು ಸಂಚರಿಸುತ್ತವೆ ಮತ್ತು ಕಣ್ಮರೆಯಾಗುತ್ತವೆ
Verse 17
ಮತ್ತು ಇರುಳು ಕಣ್ಮರೆಯಾಗುವ ಹೊತ್ತಿನ ಆಣೆ
Verse 18
ಮತ್ತು ಮುಂಜಾವು ಉಸಿರಾಡ ತೊಡಗುವಾಗಿನಾಣೆ
Verse 19
ಇದು (ಕುರ್‌ಆನ್) ಗೌರವಾನ್ವಿತ ದೂತನೊಬ್ಬನು ತಲುಪಿಸಿರುವ ಸಂದೇಶವಾಗಿದೆ
Verse 20
ಅವನು ತುಂಬಾ ಬಲಿಷ್ಠನೂ ವಿಶ್ವ ಸಿಂಹಾಸನದ ಒಡೆಯನ ಬಳಿ ಉನ್ನತ ಸ್ಥಾನ ಉಳ್ಳವನೂ ಆಗಿದ್ದಾನೆ
Verse 21
ಅವನು ಅನುಸರಣೀಯನೂ ವಿಶ್ವಾಸಾರ್ಹನೂ ಆಗಿರುತ್ತಾನೆ
Verse 22
ನಿಮ್ಮ ಸಂಗಾತಿ (ದೂತರು) ಹುಚ್ಚರೇನಲ್ಲ
Verse 23
ಅವರು ತೆರೆದ ಬಾನಿನಂಚಿನಲ್ಲಿ ಆತನನ್ನು (ಜಿಬ್‌ರೀಲ್‌ರನ್ನು) ಕಂಡರು
Verse 24
ಅವರು ಅಜ್ಞಾತ ಲೋಕದ ಮಾಹಿತಿಗಳನ್ನು ತಲುಪಿಸುವುದರಲ್ಲಿ ಜಿಪುಣರಲ್ಲ
Verse 25
ಇದು (ಕುರ್‌ಆನ್) ಶಪಿತ ಶೈತಾನನ ವಚನವಲ್ಲ
Verse 26
ನೀವು ಅದೆಲ್ಲಿ ಅಲೆಯುತ್ತಿರುವಿರಿ
Verse 27
ಇದು ಸರ್ವ ಲೋಕಕ್ಕಾಗಿರುವ ಉಪದೇಶವಾಗಿರುತ್ತದೆ
Verse 28
ನಿಮ್ಮ ಪೈಕಿ ಇಷ್ಟ ಉಳ್ಳವನು ನೇರ ಮಾರ್ಗವನ್ನು ಹಿಡಿಯಲಿ
Verse 29
ನಿಮ್ಮ ಇಚ್ಛೆಯಿಂದ ಏನೂ ಆಗುವುದಿಲ್ಲ – ಸರ್ವಲೋಕಗಳ ಒಡೆಯನಾದ ಅಲ್ಲಾಹನು ಇಚ್ಛಿಸುವ ತನಕ