Back to Languages
Kannada - Chapter 89
Translation by Abdussalam Puthige
Verse 1
ಮುಂಜಾವಿನಾಣೆ
Verse 2
ಮತ್ತು ಹತ್ತು ರಾತ್ರಿಗಳಾಣೆ
Verse 3
ಮತ್ತು ಸಮ ಹಾಗೂ ಬೆಸ ಸಂಖ್ಯೆಗಳಾಣೆ
Verse 4
ಮತ್ತು ರಾತ್ರಿಯು ತೆರಳುವಾಗಿನಾಣೆ
Verse 5
ಬುದ್ಧಿಜೀವಿಗಳಿಗೆ ಈ ಪ್ರಮಾಣಗಳು ಸಾಕೇ
Verse 6
ನೀವು ನೋಡಿದಿರಾ, ನಿಮ್ಮ ಒಡೆಯನು ಆದ್ ಜನಾಂಗದವರಿಗೆ ಏನು ಮಾಡಿದನೆಂಬುದನ್ನು
Verse 7
ಇರಮ್‌ನ ಸ್ತಂಭದವರನ್ನು
Verse 8
ನಾಡುಗಳ ಪೈಕಿ ಅಂತಹ ಇನ್ನೊಂದು ನಾಡು ಸೃಷ್ಟಿಯಾಗಿಲ್ಲ
Verse 9
ಬಯಲುಗಳಲ್ಲಿ ಕಠೋರ ಕಲ್ಲುಗಳನ್ನು ಕೆತ್ತಿದ್ದ ಸಮೂದರು –
Verse 10
ಮತ್ತು ಬೃಹತ್ ಮೊಳೆಗಳ ಫಿರ್‌ಔನ್
Verse 11
ಅವರೆಲ್ಲಾ (ತಮ್ಮ) ನಾಡುಗಳಲ್ಲಿ ಬಂಡಾಯವೆದ್ದಿದ್ದರು
Verse 12
ಮತ್ತು ಅವರು ಅಲ್ಲಿ ಅಶಾಂತಿಯನ್ನು ಮೆರೆದಿದ್ದರು
Verse 13
ಕೊನೆಗೆ ನಿಮ್ಮೊಡೆಯನು ಅವರ ಮೇಲೆ ಶಿಕ್ಷೆಯ ಚಾಟಿಯನ್ನು ಬೀಸಿದನು
Verse 14
ನಿಮ್ಮ ಒಡೆಯನಂತು ಹೊಂಚಿನಲ್ಲಿದ್ದಾನೆ
Verse 15
ಮನುಷ್ಯನನ್ನು ಅವನ ಒಡೆಯನು ಪರೀಕ್ಷೆಗೊಳಪಡಿಸಿ ಅವನಿಗೆ ಗೌರವವನ್ನೂ. ಅನುಗ್ರಹವನ್ನೂ ದಯಪಾಲಿಸಿದಾಗ ಅವನು, ನನ್ನೊಡೆಯನು ನನ್ನನ್ನು ಗೌರವಾನ್ವಿತನಾಗಿಸಿದ್ದಾನೆ ಎನ್ನುತ್ತಾನೆ
Verse 16
ಇನ್ನು ಅವನು ಆತನನ್ನು ಪರೀಕ್ಷೆಗೊಳಪಡಿಸಿ ಅವನ ಆದಾಯವನ್ನು ಸೀಮಿತ ಗೊಳಿಸಿದಾಗ ಅವನು ನನ್ನೊಡೆಯನು ನನ್ನನ್ನು ನೀಚನಾಗಿಸಿದ್ದಾನೆ ಎನ್ನುತ್ತಾನೆ
Verse 17
ಹಾಗಲ್ಲ, ನಿಜವಾಗಿ ನೀವು ಅನಾಥನನ್ನು ಗೌರವಿಸುವುದಿಲ್ಲ
Verse 18
ಬಡವನಿಗೆ ಉಣಿಸುವಂತೆ (ಪರಸ್ಪರ) ಪ್ರೋತ್ಸಾಹಿಸುವುದಿಲ್ಲ
Verse 19
ಮತ್ತು ನೀವು ವಾರೀಸು ಸೊತ್ತನ್ನು (ಅಕ್ರಮವಾಗಿ) ಕಬಳಿಸುತ್ತೀರಿ
Verse 20
ನೀವು ಸಂಪತ್ತನ್ನು ಅಪಾರವಾಗಿ ಪ್ರೀತಿಸುತ್ತೀರಿ
Verse 21
ಹಾಗಲ್ಲ, ಭೂಮಿಯನ್ನು ಕುಟ್ಟಿ ಕುಟ್ಟಿ ತಗ್ಗಿಸಲಾದಾಗ
Verse 22
ನಿಮ್ಮೊಡೆಯನು ಬಂದಾಗ, ಹಾಗೂ ಮಲಕ್‌ಗಳು ಸಾಲುಗಟ್ಟಿದಾಗ
Verse 23
ಅಂದು ನರಕವನ್ನು ಮುಂದೆ ತರಲಾಗುವುದು. ಅಂದು ಮನುಷ್ಯನಿಗೆ ವಿಷಯವು ಅರ್ಥವಾಗುವುದು. ಆದರೆ ಅಂದು ಅರ್ಥವಾದರೆ ಅವನಿಗೇನು ಲಾಭ
Verse 24
ಅವನು ಹೇಳುವನು; ಅಯ್ಯೋ, ನಾನು ಈ ಬದುಕಿಗೆ ಪೂರ್ವ ಸಿದ್ಧತೆ ನಡೆಸಬೇಕಿತ್ತು
Verse 25
ಅಂದು ಅವನು (ಅಲ್ಲಾಹನು) ನೀಡುವಂತಹ ಶಿಕ್ಷೆಯನ್ನು ಬೇರೆ ಯಾರೂ ನೀಡಲಾರರು
Verse 26
ಮತ್ತು ಅವನು ಕಟ್ಟಿಡುವ ರೀತಿಯಲ್ಲಿ ಬೇರೆ ಯಾರೂ ಕಟ್ಟಿಡಲಾರನು
Verse 27
(ಸಜ್ಜನರೊಡನೆ ಹೇಳಲಾಗುವುದು;) ಸಂತೃಪ್ತ ಚಿತ್ತವೇ
Verse 28
ಸಂತೃಪ್ತನಾಗಿ ಮರಳು ನಿನ್ನ ಒಡೆಯನೆಡೆಗೆ – ಅವನೂ ನಿನ್ನಿಂದ ಸಂತೃಪ್ತ ನಾಗಿರುವನು
Verse 29
ನನ್ನ ದಾಸರ ಜೊತೆ ಪ್ರವೇಶಿಸು
Verse 30
ನನ್ನ ಸ್ವರ್ಗವನ್ನೂ ಪ್ರವೇಶಿಸು