ಖಂಡಿತವಾಗಿಯೂ ಅಲ್ಲಾಹನು ವಿಶ್ವಾಸಿಗಳಿಂದ ಅವರ ಜೀವಗಳನ್ನು ಮತ್ತು ಅವರ ಸೊತ್ತುಗಳನ್ನು ಖರೀದಿಸಿರುವನು – ಅವರಿಗೆ ಸ್ವರ್ಗವನ್ನು ನೀಡಲಿಕ್ಕಾಗಿ. ಅವರು ಅಲ್ಲಾಹನ ಮಾರ್ಗದಲ್ಲೇ ಹೋರಾಡುತ್ತಾರೆ, ವಧಿಸುತ್ತಾರೆ ಮತ್ತು ವಧಿಸಲ್ಪಡುತ್ತಾರೆ. ತೌರಾತ್, ಇಂಜೀಲ್ ಮತ್ತು ಕುರ್‌ಆನ್‌ನಲ್ಲಿ ಅವರಿಗೆ ನೀಡಲಾಗಿರುವ ವಾಗ್ದಾನವು ಸತ್ಯವಾಗಿದೆ. ಅಲ್ಲಾಹನಿಗಿಂತ ಉತ್ತಮವಾಗಿ ತನ್ನ ಕರಾರನ್ನು ಪಾಲಿಸುವವನು ಯಾರಿದ್ದಾನೆ? ಆದ್ದರಿಂದ ಅವನ ಜೊತೆ ನೀವು ಮಾಡಿಕೊಂಡಿರುವ ವ್ಯವಹಾರಕ್ಕಾಗಿ ಸಂಭ್ರಮಿಸಿರಿ. ಇದು ನಿಜಕ್ಕೂ ಮಹಾ ವಿಜಯವಾಗಿದೆ