ವಿಶ್ವಾಸಿಗಳೇ, ಖಂಡಿತವಾಗಿಯೂ ಧರ್ಮಗುರುಗಳು ಮತ್ತು ಸನ್ಯಾಸಿಗಳಲ್ಲಿ ಹೆಚ್ಚಿನವರು ಜನರ ಸಂಪತ್ತನ್ನು ಅಕ್ರಮ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. (ಅವರಿಗೂ) ಚಿನ್ನ ಹಾಗೂ ಬೆಳ್ಳಿಯನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚುಮಾಡದೆ ಅವುಗಳನ್ನು ಸಂಗ್ರಹಿಸಿಟ್ಟುಕೊಳ್ಳುವವರಿಗೂ ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ